ಮುಂಬೈ, ಅ 01 (DaijiworldNews/HR): ಮುಂಬೈನ ಉಪನಗರ ಕಾಂದಿವಲಿ ಬಳಿ ಬೈಕ್ನಲ್ಲಿ ಬಂದ ಅಪರಿಚಿತರು ಗುಂಡಿನ ದಾಳಿ ನಡೆಸಿದ ಪರಿಣಾಮ ಯುವಕ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಅಂಕಿತ್ ಯಾದವ್ ಎಂದು ಗುರುತಿಸಲಾಗಿದೆ.
ಗುಂಪಿನಲ್ಲಿ ನಿಂತಿದ್ದ ವೇಳೆ ಶುಕ್ರವಾರ ರಾತ್ರಿ ದುಷ್ಕರ್ಮಿಗಳು ಅವರ ಮೇಲೆ ನಾಲ್ಕು ಸುತ್ತು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದು, ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ಉಪ ಪೊಲೀಸ್ ಆಯುಕ್ತ ವಿಶಾಲ್ ಠಾಕೂರ್ ತಿಳಿಸಿದ್ದಾರೆ.