ನವದೆಹಲಿ, ಅ 02 (DaijiworldNews/HR): 2.3 ಮಿಲಿಯನ್ ಭಾರತೀಯ ಖಾತೆಗಳನ್ನು ಆಗಸ್ಟ್ ತಿಂಗಳಲ್ಲಿ ವಾಟ್ಸಾಪ್ ನಿಷೇಧಿಸಿದ್ದು, ಅದರಲ್ಲಿ 10 ಲಕ್ಷಕ್ಕೂ ಹೆಚ್ಚಿನ ಖಾತೆಗಳನ್ನು ಬಳಕೆದಾರರಿಂದ ಯಾವುದೇ ವರದಿ ಪಡೆಯುವ ಮೊದಲೇ ತೆಗೆದುಹಾಕಲಾಗಿದೆ ಎಂದು ವಾಟ್ಸಾಪ್ ತಿಳಿಸಿದೆ.
ಕಳೆದ ವರ್ಷ ಜಾರಿಗೆ ಬಂದ ಕಠಿಣ ಐಟಿ ನಿಯಮಗಳ ಪ್ರಕಾರ ಕಾನೂನು ಉಲ್ಲಂಘನೆ ಸೇರಿದಂತೆ ಹಲವು ಕಟ್ಟುನಿಟ್ಟಿನ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಕಳೆದ ಜೂನ್ನಲ್ಲಿ 2.2 ಮಿಲಿಯನ್ ಭಾರತೀಯ ಖಾತೆಗಳನ್ನು ನಿಷೇಧಿಸಿದ್ದು, ಆಗಸ್ಟ್ ನಲ್ಲಿ 2.3 ಮಿಲಿಯನ್ ಖಾತೆಗಳನ್ನು ನಿಷೇಧಿಸಿದೆ.
ಇನ್ನು ಖಾತೆಗಳಲ್ಲಿ ಅನಗತ್ಯ ಸಂದೇಶಗಳನ್ನು ಕಳುಹಿಸುವುದನ್ನು ತಡೆಯುವುದು ಅಥವಾ ಅಸಹಜವಾದ ಸಂದೇಶಗಳನ್ನು ಕಳುಹಿಸುವ ಖಾತೆಗಳನ್ನು ಗುರುತಿಸಿ ಸುಧಾರಿತ ಕ್ರಮವನ್ನು ವಾಟ್ಸ್ಆಯಪ್ ಕೈಗೊಂಡಿದೆ ಎನ್ನಲಾಗಿದೆ.