ಹುಬ್ಬಳ್ಳಿ, ಅ 02 (DaijiworldNews/HR): ಭ್ರಷ್ಟಾಚಾರದ ಬಗ್ಗೆ ನಕಲಿ ಗಾಂಧಿ ಪರಿವಾರ ಮಾತನಾಡುವುದೇ ದುರಂತ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ರಾಹುಲ್ ಗಾಂಧಿ ವಿರುದ್ದ ವಾಗ್ದಾಳಿ ನಡೆಸಿರುವ ಅವರು, ಅವರು ಭಾರತ ಜೋಡೋ ಯಾತ್ರೆ ಮುಗಿದ ತಕ್ಷಣ ವಿಶ್ರಾಂತಿಗೆ ವಿದೇಶಕ್ಕೆ ಹೋಗುತ್ತಾರೆ. ಈಗಾಗಲೇ ಈ ಹಿಂದಿನ ಚುನಾವಣೆಯಲ್ಲಿ ಜನರು ಯಾರು ಯಾರ ಪರ ಇದ್ದಾರೆ ಎಂಬುದನ್ನು ತಮ್ಮ ತೀರ್ಮಾನ ಕೊಟ್ಟಿದ್ದಾರೆ ಎಂದರು.
ಮೋದಿ ಆಡಳಿತದಲ್ಲಿ ದೇಶದ ಸಾಲ ಮೂರು ಪಟ್ಟು ಹೆಚ್ಚಾಗಿದೆ ಎಂಬ ರಾಹುಲ್ ಮಾತಿಗೆ ಪ್ರತಿಕ್ರಿಯಿಸಿದ ಅವರು, ಯಾರ ಕಾಲದಲ್ಲಿ ಹೆಚ್ಚು ಸಾಲ ಆಗಿದೆ ಎಂಬುದನ್ನು ಅಂಕಿ ಅಂಶಗಳಿದ್ದು, ಕೊರೊನಾ ಸಮಯದಂತಹ ಪರಿಸ್ಥಿತಿಯನ್ನು ಸರ್ಕಾರ ಯಶಸ್ವಿಯಾಗಿ ನಿಭಾಯಿಸಿದೆ. ಭಾರತ ಅಭಿವೃದ್ಧಿ ಹೊಂದುತ್ತಿದೆ. ಪ್ರಪಂಚವೇ ಭಾರತವನ್ನು ಗುರುತಿಸುವಂತೆ ಆಗಿದೆ ಎಂದು ಹೇಳಿದ್ದಾರೆ.