ಜಮ್ಮು, ಅ 02 (DaijiworldNews/HR): ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್ಕೌಂಟರ್ನಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಿರುವ ಘಟನೆ ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಇಮಾಮಸಾಹಿಬ್ ಪ್ರದೇಶದ ಬಾಸ್ಕುಚಾನ್ ಗ್ರಾಮದಲ್ಲಿ ನಡೆದಿದೆ.
ಹತನಾದ ಭಯೋತ್ಪಾದಕನನ್ನು ಶೋಪಿಯಾನ್ನ ನೌಪೋರಾ ಬಾಸ್ಕುಚಾನ್ನ ನಸೀರ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದೆ.
ಇನ್ನು ಹತ್ಯೆಯಾದ ಭಯೋತ್ಪಾದಕ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದು, ಹಲವು ಭಯೋತ್ಪಾದಕ ಅಪರಾಧಗಳಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.
ಭಯೋತ್ಪಾಕನಿಂದ ಎಕೆ ರೈಫಲ್ ಸೇರಿದಂತೆ ದೋಷಾರೋಪಣೆಯ ಸಾಮಗ್ರಿಗಳು, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.