ನವದೆಹಲಿ, ಅ 02 (DaijiworldNews/HR): ಅಜಯ್ ಭಾದೂ ಅವರನ್ನು ಭಾರತೀಯ ಚುನಾವಣಾ ಆಯೋಗದ ಉಪ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ.
ಅಜಯ್ ಭಾದೂ ಗುಜರಾತ್ ಕೇಡರ್ನ 1999 ಬ್ಯಾಚ್ನ ಐಎಎಸ್ ಅಧಿಕಾರಿಯಾಗಿದ್ದು, ಅವರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಜಂಟಿ ಕಾರ್ಯದರ್ಶಿಯಾಗಿದ್ದಾರೆ.
ಇನ್ನು ಸರಕಾರದ ಕಾನೂನು ಮತ್ತು ನ್ಯಾಯ ಸಚಿವಾಲಯದ ಮೇ 12, 2022ರ ಗೆಜೆಟ್ ಅಧಿಸೂಚನೆಯ ಅನುಸಾರ ರಾಜೀವ್ ಕುಮಾರ್ ಅವರು ಭಾರತೀಯ ಚುನಾವಣಾ ಆಯೋಗದ ಕಚೇರಿಯಲ್ಲಿ ಭಾರತದ 25ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದು, ಇದೀಗ ಭಾರತೀಯ ಚುನಾವಣಾ ಆಯೋಗದ ಉಪ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿದ್ದಾರೆ.