ಬೆಂಗಳೂರು, ಫೆ 12(SM): ಸಿಎಂ ಕುಮಾರಸ್ವಾಮಿ ವಿರುದ್ಧ ಪ್ರತಿಪಕ್ಷ ನಾಯಕ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿಗಳು ಕುರ್ಚಿ ಉಳಿಸಿಕೊಳ್ಳಲು ಕಸರತ್ತು ನಡೆಸುತ್ತಿದ್ದಾರೆ. ಇದೇ ಕಾರಣಕ್ಕೆ ಆಡಿಯೋ ಕಟ್ ಮಾಡಿ ಎಡಿಟ್ ಮಾಡಿಸಿ ದುರುಪಯೋಗಪಡಿಸಿದ್ದಾರೆ ಎಂದು ಬಿ.ಎಸ್. ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರ ಧ್ವನಿ ಸುರಳಿ ಪ್ರಕರಣವನ್ನ ಎಸ್ಐಟಿ ತನಿಖೆಗೆ ಒಪ್ಪಿಸುವಂತೆ ಪಟ್ಟು ಹಿಡಿದರೆ, ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಸದನ ಸಮಿತಿಗೆ ನೀಡುವಂತೆ ಒತ್ತಾಯಿಸಿದ್ದಾರೆ. ಧ್ವನಿ ಸುರುಳಿ ಘಟನೆಯನ್ನು ಸಿಎಂ ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಕುರ್ಚಿ ಉಳಿಸಿಕೊಳ್ಳಲು ಬಳಸಿಕೊಂಡಿದ್ದಾರೆ ಎಂದು ಬಿಎಸ್ವೈ ಗಂಭೀರ ಆರೋಪ ಮಾಡಿದ್ದಾರೆ.
ಸಿಎಂ ಕುಮಾರಸ್ವಾಮಿ ಮಾಡಿರುವ ಕೆಲಸ ಅವರಿಗೆ ಶೋಭೆ ತರುವಂತದ್ದಲ್ಲ. ಈ ಪ್ರಕರಣದ ತನಿಖೆಯನ್ನು ಸದನ ಸಮಿತಿ ಮೂಲಕವೇ ಮಾಡಬೇಕು. ಯಾವುದೇ ಕಾರಣಕ್ಕೂ ಎಸ್ಐಟಿ ಮೂಲಕ ನಡೆಸುವುದನ್ನು ನಾವು ಒಪ್ಪುವುದಿಲ್ಲ ಎಂದು ಸ್ಪೀಕರ್ ಅವರನ್ನು ಒತ್ತಾಯಿಸಿದ್ದಾರೆ.