ಪಾಲ್ಘರ್ , ಅ 03 (DaijiworldNews/MS): ಗರ್ಬಾ ಕಾರ್ಯಕ್ರಮವೊಂದರಲ್ಲಿ ನೃತ್ಯ ಮಾಡುತ್ತಿರುವಾಗ ಕುಸಿದು ಬಿದ್ದ 35 ವರ್ಷ ಪುತ್ರನನ್ನು ಆಸ್ಪತ್ರೆಗೆ ಸಾಗಿಸಿ ಅಲ್ಲಿ ಮಗನ ಸಾವಿನ ಸುದ್ದಿ ತಿಳಿದು ಅಘಾತಕ್ಕೊಳಗಾದ ತಂದೆಯೂ ಕ್ಷಣಾರ್ಧದಲ್ಲೇ ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಿರಾರ್ ಪಟ್ಟಣದಲ್ಲಿ ನಡೆದಿದೆ.
ಪೊಲೀಸ್ ಮೂಲಗಳ ಪ್ರಕಾರ, ಭಾನುವಾರದ ಮಧ್ಯರಾತ್ರಿ ವಿರಾರ್ನ ಗ್ಲೋಬಲ್ ಸಿಟಿ ಕಾಂಪ್ಲೆಕ್ಸ್ನಲ್ಲಿ ಗಾರ್ಬಂಟ್ನಲ್ಲಿ ನೃತ್ಯ ಮಾಡುವಾಗ ಮನೀಶ್ ನಾರಾಪ್ಜಿ ಸೋನಿಗ್ರಾ ಅವರು ಹಠಾತ್ ಕುಸಿದು ಬಿದ್ದಿದ್ದಾರೆ.
ಸೋನಿಗ್ರಾ ಅವರನ್ನು ತಕ್ಷಣವೇ ಅವರ ತಂದೆ ನಾರಾಪ್ಜಿ ಸೋನಿಗ್ರಾ (66) ಅವರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದರು.ವೈದ್ಯರು ಮಗ ಸಾವನ್ನಪ್ಪಿದ್ದಾರೆ ಎಂದು ಘೋಷಿಸುತ್ತಿದ್ದಂತೆ ತಂದೆ ಕೂಡ ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಎರಡು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.