ಲಕ್ನೋ,ಅ 04 (DaijiworldNews/MS): ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ವೈದ್ಯರನ್ನು ಇಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾಗಿದ್ದ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ವೈದ್ಯರನ್ನು ಬಂಧಿಸಲಾಗಿದೆ. . ಬಸ್ತಿ ಸದರ್ ಕೊಟ್ವಾಲಿ ಪ್ರದೇಶದಲ್ಲಿರುವ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ವೈದ್ಯ ಮಹಿಳೆಯನ್ನು ಕರೆಸಿಕೊಂಡ ನಂತರ ಆಕೆಯನ್ನು ಹಾಸ್ಟೆಲ್ ಕೋಣೆಗೆ ಕರೆದೊಯ್ದು, ಅಲ್ಲಿ ಆತ ಹಾಗು ಇಬ್ಬರು ಸಹೋದ್ಯೋಗಿಗಳು ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಭೀತಿಗೊಂಡ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕಿಯಾಗಿರುವ ಸಂತ್ರಸ್ಥೆ ಬಸ್ತಿಯಿಂದ ಲಕ್ನೋಗೆ ಆಗಮಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿ ಕೊಂಡು ತನಿಖೆ ಕೈಗೊಂಡು ಅಸ್ಪತ್ರೆ ಮೇಲೆ ದಾಳಿ ನಡೆಸಲಾಗಿದೆ.
ಕಾಮುಕ ವೈದ್ಯರನ್ನು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.