ಉತ್ತರಾಖಂಡ, ಅ 04 (DaijiworldNews/DB): ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ದ್ರೌಪದಿಯ 2 ಪರ್ವತದಲ್ಲಿ ಉಂಟಾದ ಹಿಮಕುಸಿತದಿಂದಾಗಿ 10 ಮಂದಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಹಿಮಕುಸಿತದಿಂದಾಗಿ ಸುಮಾರು 28ಕ್ಕೂ ಹೆಷ್ಷು ಮಂದಿ ಪರ್ವತಾರೋಹಿಗಳು ಸಿಕ್ಕಿ ಹಾಕಿಕೊಂಡಿದ್ದರು. ಈ ಪೈಕಿ ಕನಿಷ್ಠ 10 ಮಂದಿ ಮಂದಿ ಸಾವನ್ಮಪ್ಪಿದ್ದಾರೆ ಎಂದು ಎನೆಹರು ಇನ್ಸ್ಟಿಟ್ಯೂಟ್ ಆಫ್ ಮೌಂಟೇನಿಯರಿಂಗ್ ಪ್ರಾಂಶುಪಾಲ ಅಮಿತ್ ಬಿಶ್ತ್ ಹೇಳಿರುವುದಾಗಿ ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.
ಹಿಮಕುಸಿತದಲ್ಲಿ ಸಿಲುಕಿಕೊಂಡವರ ರಕ್ಷಣೆಗಾಗಿ ಜಿಲ್ಲಾಡಳಿತ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್), ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್), ಭಾರತೀಯ ಸೇನೆ ಮತ್ತು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಸಿಬಂದಿ ಬಿರುಸಿನ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ತಿಳಿದು ಬಂದಿದೆ.