ಡೆಹ್ರಾಡೂನ್, ಅ 05 (daijiworldNews/HR): ಉತ್ತರಾಖಂಡ್ನ ಪೌರಿ ಗಡ್ವಾಲ್ನಲ್ಲಿ ಮದುವೆ ದಿಬ್ಬಣದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದು 25 ಮಂದಿ ಪ್ರಯಾಣಿಕರು ಸಾವನ್ನಪ್ಪಿ ಹಲವರು ಗಂಭೀರ ಗಾಯಗೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಈ ಕುರಿತು ರಾಜ್ಯ ಪೊಲೀಸ್ ಮುಖ್ಯಸ್ಥ ಅಶೋಕ್ ಕುಮಾರ್ ಮಾಹಿತಿ ನೀಡಿದ್ದು, ಬಸ್ಸಿನಲ್ಲಿ ಸುಮಾರು ನಲ್ವತ್ತಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ಎಸ್ಡಿಆರ್ಎಫ್ ಧಾವಿಸಿ ರಾತ್ರೋರಾತ್ರಿ 21 ಜನರನ್ನು ರಕ್ಷಿಸಿದ್ದಾರೆ, ಅಲ್ಲದೆ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ ಎಂದರು.
ಇನ್ನು ಮದುವೆ ಸಮಾರಂಭ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಪೌರಿ ಗಡ್ವಾಲ್ ತಲುಪುತಿದ್ದಂತೆ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ಸು ಸುಮಾರು 500 ಮೀಟರ್ ಆಳದ ಉರುಳಿ ಬಿದ್ದು ಅವಘಡ ಸಂಭವಿಸಿದೆ.