ಮುಂಬೈ, ಅ 05 (DaijiworldNews/MS): ವೇಗವಾಗಿ ಬಂದ ಕಾರೊಂದು ನಿಂತಿದ್ದ ಕಾರು ಮತ್ತು ಅಂಬುಲೆನ್ಸ್ ಗೆ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಐವರು ಮೃತಪಟ್ಟಿದ್ದು, 12 ಮಂದಿ ಗಾಯಗೊಂಡಿರುವ ಘಟನೆ ಮುಂಬೈನ ಬಾಂದ್ರಾ-ವರ್ಲಿ ಸಮುದ್ರ ಬಳಿ ನಡೆದಿದೆ.
ಬುಧವಾರ ಮುಂಜಾನೆ 3:30ರ ಸುಮಾರಿಗೆ ಈ ಅಪಘಾತ ನಡೆದಿತ್ತು. ಈ ಅಪಘಾತದ ಮುಂಚೆ ಸಂಭವಿಸಿದ್ದ ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲು ಬಾಂದ್ರಾದಲ್ಲಿ ವರ್ಲಿ ಲೇನ್ಗೆ ಕರೆದೊಯ್ಯಲು ಅಂಬುಲೆನ್ಸ್ ರಸ್ತೆ ಬದಿಯಲ್ಲಿ ನಿಲ್ಲಿಸಿ ಸಿದ್ಧತೆ ನಡೆಸಲಾಗುತ್ತಿತ್ತು. ಆದರೆ ಇದೇ ವೇಳೆ ಅತಿವೇಗವಾಗಿ ಬಂದ ಕಾರೊಂದು ವಾಹನಕ್ಕೆ ಡಿಕ್ಕಿ ಹೊಡೆದು ಐವರು ಸಾವನ್ನಪ್ಪಿದ್ದಾರೆ.
ಈ ಅಪಘಾತದ ದೃಶ್ಯಗಳು ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಘಾತದ ನಂತರ ಸ್ಥಳೀಯರ ನೆರವಿನಿಂದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ನಂತರ ಅಧಿಕಾರಿಗಳು ಬಾಂದ್ರಾದಿಂದ ವರ್ಲಿಗೆ ಹೋಗುವ ರಸ್ತೆಯನ್ನು ಮುಚ್ಚಿದ್ದಾರೆ.