ಮುಂಬೈ, ಅ 05 (DaijiworldNews/MS): ಮುಂಬೈನ ಸರ್ ಎಚ್ಎನ್ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ಬುಧವಾರ ಮಧ್ಯಾಹ್ನ ಬಾಂಬ್ ಬೆದರಿಕೆ ಕರೆ ಬಂದಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರಕ್ಕೆ ಮಧ್ಯಾಹ್ನ 12:57ಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿ ಅಂಬಾನಿ ಕುಟುಂಬದ ಸದಸ್ಯರಿಗೂ ಬೆದರಿಕೆ ಹಾಕಿದ್ದಾನೆ.ಈ ಹಿನ್ನೆಲೆಯಲ್ಲಿ ಆಸ್ಪತ್ರೆ ವೈದ್ಯರು, ಸಿಬ್ಬಂದಿಗಳು ಆತಂಕಕ್ಕೀಡಾಗಿದ್ದಾರೆ. ಆಸ್ಪತ್ರೆಯಲ್ಲಿ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿಗಳು ಪರಿಶೀಲನೆ ನಡೆಸಿದ್ದಾರೆ.
"ಆಸ್ಪತ್ರೆಯನ್ನು ಸ್ಫೋಟಿಸುವುದಾಗಿ ಕರೆ ಮಾಡಿದಾತ ಬೆದರಿಕೆ ಹಾಕಿದ್ದು ಅಂಬಾನಿ ಕುಟುಂಬದ ಕೆಲವು ಸದಸ್ಯರ ಹೆಸರಿನಲ್ಲಿ ಬೆದರಿಕೆ ಹಾಕಿದ್ದಾರೆ" ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಡಿಬಿ ಮಾರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.