ನವದೆಹಲಿ, ಅ 11 (DaijiworldNews/HR): ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಈ ವಾರದಲ್ಲೇ ತೀರ್ಪು ಪ್ರಕಟಿಸುವ ಸಾಧ್ಯತೆಗಳು ಇವೆ ಎನ್ನಲಾಗಿದೆ.
ನ್ಯಾ.ಹೇಮಂತ್ ಗುಪ್ತಾ ಅವರು ಅ.16ರಂದು ನಿವೃತ್ತಿಯಾಗಲಿದ್ದು, ಈ ವಾರವೇ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶದ ವಿರುದ್ಧ ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿಗಳ ಬಗ್ಗೆ ತೀರ್ಪು ಪ್ರಕಟವಾಗಲಿದೆ.
ಉಡುಪಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೆಲವು ವಿದ್ಯಾರ್ಥಿನಿಯರು ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದು, ಈ ವಿಚಾರ ಕರ್ನಾಟಕ ಹೈಕೋರ್ಟ್ನಲ್ಲಿಯೂ ವಿಚಾರಣೆ ನಡೆದು ಮಾ.15ರಂದು ವಿದ್ಯಾರ್ಥಿನಿಯವರ ಕೋರಿಕೆ ತಿರಸ್ಕರಿಸಿ, ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಇಲ್ಲ ಎಂದು ತೀರ್ಪು ನೀಡಿತ್ತು. ಅದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ.