ನವದೆಹಲಿ, ಅ 14 (DaijiworldNews/MS): ಅಕ್ರಮ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ತಮ್ಮ ವಿರುದ್ದ , ದಾಖಲಾಗಿದ್ದ ಎಫ್ ಐ ಆರ್ ರದ್ದುಪಡಿಸುವಂತೆ ಬಿ.ಎಸ್ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಹೀಗಾಗಿ ಮಾಜಿ ಸಿಎಂಗೆ ಮತ್ತೆಸಂಕಷ್ಟ ಎದುರಾಗಿದೆ.
ಹತ್ತು ವರ್ಷಗಳ ಹಿಂದಿನ ಅಕ್ರಮ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ಎಸ್ ಯಡಿಯೂರಪ್ಪ ಹಾಗೂ ಮುರುಗೇಶ್ ನಿರಾಣಿ, ಇತರರ ವಿರುದ್ಧ ಪ್ರಕರಣ ದಾಖಲಾಗಿತ್ತು,
ಅಕ್ರಮ ಡಿನೋಟಿಫಿಕೇಶನ್ ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್ ಐ ಆರ್ ರದ್ದುಪಡಿಸುವಂತೆ ಸುಪ್ರೀಂ ಕೋರ್ಟ್ ಗೆ ಯಡಿಯೂರಪ್ಪಅರ್ಜಿ ಸಲ್ಲಿಸಿದ್ದರು. ಆದರೆ ಸುಪ್ರೀಂಕೋರ್ಟ್ ಈ ಬಗ್ಗೆ ನಾವು ವಿಚಾರಣೆ ನಡೆಸುವುದಿಲ್ಲ ಎಂದು ಅರ್ಜಿ ತಿರಸ್ಕರಿಸಿದೆ. ವಿಚಾರಣೆಗೆ ಸುಪ್ರೀಂಕೋರ್ಟ್ ನ ಸಿಜೆಐ ಯು.ಯು ಲಲಿತ್ ನಿರಾಕರಿಸಿದ್ದಾರೆ, ದೀಪಾವಳಿ ನಂತರ ಅರ್ಜಿ ವಿಚಾರಣೆ ನಡೆಸುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.