ನವದೆಹಲಿ, ಅ 18 (DaijiworldNews/DB): ಪ್ರಧಾನಿ ನರೇಂದ್ರ ಮೋದಿಯವರು ಅತ್ಯಾಚಾರಿಗಳ ಪರ ವಹಿಸಿದ್ದಾರೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿಗಳನ್ನು ಸನ್ನಡತೆ ಆಧಾರದಲ್ಲಿ ಕಳೆದ ಆಗಸ್ಟ್ನಲ್ಲಿ ಬಿಡುಗಡೆ ಮಾಡಿದ ಕ್ರಮಕ್ಕೆ ಸಂಬಂಧಿಸಿದಂತೆ ಮಂಗಳವಾರ ಟ್ವೀಟ್ ಮುಖಾಂತರ ಆಕ್ರೋಶ ವ್ಯಕ್ತಪಡಿಸಿದ ಅವರು, ಮಹಿಳೆಯರನ್ನು ಗೌರವಿಸಿ ಎಂಬುದಾಗಿ ಕೆಂಪುಕೋಟೆಯಿಂದ ಕರೆ ನೀಡುವ ಪ್ರಧಾನಿ ವಾಸ್ತವದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದವರ ಪರವಾಗಿ ನಿಲ್ಲುತ್ತಾರೆ ಎಂದರು.
ಪ್ರಧಾನಿ ನರೇಂದ್ರ ಮೋದಿಯವರ ಉದ್ದೇಶ ಮತ್ತು ಭರವಸೆಗಳ ನಡುವೆ ಇರುವ ವ್ಯತ್ಯಾಸ ಸ್ಪಷ್ಟವಾಗಿ ಜನರಿಗೆ ಗೊತ್ತಾಗಿದೆ ಎಂದವರು ಇದೇ ವೇಳೆ ಹೇಳಿದ್ದಾರೆ.
ಬಿಲ್ಕಿಸ್ ಬಾನೊ ಅತ್ಯಾಚಾರ ಪ್ರಕರಣದ 11 ಮಂದಿ ಅಪರಾಧಿಗಳನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಲು ಗುಜರಾತ್ನ ಬಿಜೆಪಿ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿತ್ತು. ಈ ಶಿಫಾರಸ್ಸಿಗೆ ಕೇಂದ್ರ ಸರ್ಕಾರ 2 ವಾರಕ್ಕೆ ಮೊದಲೇ ಅಂಗೀಕಾರ ನೀಡಿತ್ತು ಎಂಬುದು ಬಹಿರಂಗಗೊಂಡಿದ್ದು, ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಪ್ರಧಾನಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.