ನವದೆಹಲಿ, ಅ 19(DaijiworldNews/MS): ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆಗೆ ಗಣ್ಯರಿಂದ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.
ಎಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, 'ಕಾಂಗ್ರೆಸ್ ಪಕ್ಷದ ಉಸ್ತುವಾರಿಯನ್ನು ವಹಿಸಿಕೊಂಡ ಖರ್ಗೆ ಅವರಿಗೆ ಅಭಿನಂದನೆ ತಿಳಿಸುತ್ತೇನೆ. ಅವರ ಅವಧಿಯಲ್ಲಿ ಅವರಿಂದ ಆಗುವ ಕಾರ್ಯ ಫಲಪ್ರದವಾಗಿರಲಿ ಎಂದು ಬಯಸುತ್ತೇನೆ' ಎಂದಿದ್ದಾರೆ. 9000ಕ್ಕೂ ಅಧಿಕ ಮತಗಳನ್ನು ಪಡೆದಿರುವ ಖರ್ಗೆ, ಪ್ರತಿಸ್ಪರ್ಧಿ ಶಶಿ ತರೂರ್ ವಿರುದ್ಧ ಭರ್ಜರಿ ಜಯ ಸಾಧಿಸಿದ್ದಾರೆ.