ಬೆಂಗಳೂರು,ನ 02(DaijiworldNews/MS): ಮುಂಬರುವ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ಹಾಗೂ ಪಕ್ಷದ ಸಂಘಟನೆಗೆ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಕಾಂಗ್ರೆಸ್ ಪಕ್ಷ ಪಾದಯಾತ್ರೆ ನಡೆಸಲು ಚಿಂತನೆ ನಡೆಸಿದೆ.
ಕೃಷ್ಣಾ ನ್ಯಾಯಾಧೀಕರಣ, ಕಳಸಾ ಬಂಡೂರಿ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಯಾತ್ರೆ ನಡೆಸುವುದಾಗಿ ಕಾಂಗ್ರೆಸ್ ಹೇಳಿದೆ.
ಮೇಕೆದಾಟು ಪಾದಯಾತ್ರೆ ಹಾಗೂ ಭಾರತ್ ಜೋಡೋ ಯಾತ್ರೆ ಯಶಸ್ವಿಯಾದ ಹಿನ್ನಲೆ ಉತ್ಸಾಹದಲ್ಲಿ ಇರುವ ಕಾಂಗ್ರೆಸ್ ಆಡಳಿತ ಪಕ್ಷಕ್ಕೆ ಬಿಸಿ ಮುಟ್ಟಿಸಲು ಪಾದಯಾತ್ರೆಯ ಮೂಲಕ ಕೈ ಪಾಳಯ ಸಜ್ಜಾಗುತ್ತಿದೆ.
ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಬಿಜೆಪಿ ಪ್ರಬಲವಾಗಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ತಂತ್ರಗಾರಿಕೆಗೆ ಪ್ರತಿತಂತ್ರ ಹೂಡುವ ಮೂಲಕ ಚುನಾವಣೆಯ ದೃಷ್ಟಿಯಲ್ಲಿ ಜನರ ಗಮನ ತಮ್ಮತ್ತ ಸೆಳೆಯಲು ಕಾಂಗ್ರೆಸ್ ಪ್ಲ್ಯಾನ್ ಮಾಡುತ್ತಿದೆ.
ಎರಡು ಯಾತ್ರೆಗಳು ನಡೆಯಲಿದ್ದು, ನವೆಂಬರ್ ನಲ್ಲಿ ಚಾಲನೆ ನೀಡಿ ಡಿಸೆಂಬರ್ ನಲ್ಲಿ ಅಂತ್ಯಗೊಳಿಸಬೇಕು ಎಂಬುವುದು ಕಾಂಗ್ರೆಸ್ ಪಾಳಯದ ಆಲೋಚನೆಯಾಗಿದೆ ಎಂದು ತಿಳಿದುಬಂದಿದೆ.