ಪಂಜಾಬ್ , ನ 04 (DaijiworldNews/MS): ಪಂಜಾಬ್ನ ಅಮೃತಸರದಲ್ಲಿ ಶಿವಸೇನೆ ನಾಯಕ ಸುಧೀರ್ ಸೂರಿ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ನಗರದ ದೇವಸ್ಥಾನದ ಹೊರಭಾಗದಲ್ಲಿ ಈ ಘಟನೆ ನಡೆದಿದೆ.
ಗೋಪಾಲ್ ದೇವಸ್ಥಾನದ ಬಳಿ ಮಜೀತಾ ರಸ್ತೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಸೂರಿ ಮೇಲೆ ಗುಂಡು ಹಾರಿಸಿದ್ದಾರೆ. ಸೂರಿ ದೇವಸ್ಥಾನದ ಹೊರಗೆ ಪ್ರತಿಭಟನೆ ನಡೆಸುತ್ತಿದ್ದಾಗ ಜನಸಮೂಹದಿಂದ ಯಾರೋ ಹೊರಬಂದು ಅವರನ್ನು ಕೊಲೆ ಮಾಡಿದ್ದಾರೆ ಎಂದು ವರದಿಯಾಗಿದೆ.