ಶ್ರೀನಗರ, ನ 09 (DaijiworldNews/DB): ವಾಲಿಬಾಲ್ ಪಂದ್ಯಾಟದ ವಿಚಾರವಾಗಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಶ್ರೀನಗರದಲ್ಲಿರುವ ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ (ಎನ್ಐಟಿ) ಮಂಗಳವಾರ ತಡರಾತ್ರಿ ನಡೆದಿದೆ.
ಘಟನೆಯಲ್ಲಿ ಐವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆಂದು ತಿಳಿದು ಬಂದಿದೆ. ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿರುವ ವಿಚಾರ ತಿಳಿದು ಎನ್ಐಟಿ ಅಧಿಕಾರಿಗಳು ಕೂಡಲೇ ಸ್ಥಳಕ್ಕಾಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಗಲಾಟೆ ಕುರಿತಂತೆ ತನಿಖೆ ನಡೆಸಿದ್ದಾರೆ.
ವಾಲಿಬಾಲ್ ಪಂದ್ಯ ನಡೆದ ಬಳಿಕ ವಿವಿಧ ಬ್ಯಾಚ್ಗಳಿಗೆ ಸಂಬಂಧಿಸಿದ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಐವರು ವಿದ್ಯಾರ್ಥಿಗಳಿಗೆ ಘಟನೆಯಲ್ಲಿ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆ ಮಾಹಿತಿ ಬಂದ ತತ್ಕ್ಷಣ ಪೊಲೀಸರು ಕ್ಯಾಂಪಸ್ಗೆ ತೆರಳಿ ಪರಿಸ್ಥಿತಿ ತಿಳಿಗೊಳಿಸಲಾಗಿದೆ, ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ.