ಮಧುರೈ, ನ 10 (DaijiworldNews/DB): ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ ಸಂಭವಿಸಿ ಐವರು ಸಾವನ್ನಪ್ಪಿದ ಘಟನೆ ಮಧುರೈ ಜಿಲ್ಲೆಯ ಉಸಿಲಂಬಟ್ಟಿ ಬಳಿ ನಡೆದಿದೆ.
ಉಸಿಲಂಬಟ್ಟಿ ಬಳಿಯ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಘಟನೆ ನಡೆದಿದೆ. ಸ್ಪೋಟದ ತೀವ್ರತೆಗೆ ಐದು ಮಂದಿ ಜೀವ ಕಳೆದುಕೊಂಡಿದ್ದಾರೆ. ಸ್ಪೋಟಕ್ಕೆ ಕಾರಣ ತಿಳಿದು ಬಂದಿಲ್ಲ ಎಂದು ಮಧುರೈ ಎಸ್ಪಿ ತಿಳಿಸಿದ್ದಾರೆ.
ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.