ನವದೆಹಲಿ, ನ 11 (DaijiworldNews/MS): 200 ಕೋಟಿ ರೂ. ಸುಲಿಗೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಜಾಮೀನಿಗೆ ವಿರೋಧ ವ್ಯಕ್ತಪಡಿಸಿದ ಜಾರಿ ನಿರ್ದೇಶನಾಲಯವನ್ನು ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ಜಾರಿ ನಿರ್ದೇಶನಾಲಯ 'ಪಿಕ್ ಅಂಡ್ ಚೂಸ್' ನೀತಿಯನ್ನು ಅಳವಡಿಸಿಕೊಂಡಿದೆ. 200 ಕೋಟಿ ರೂ. ಮನಿ ಲಾಂಡರಿಂಗ್ ಪ್ರಕರಣದಲ್ಲಿ ಆರೋಪಿ ಸುಕೇಶ್ ಚಂದ್ರಶೇಖರ್ ಅವರ ವಿರುದ್ಧ ಲುಕ್ ಔಟ್ ಸುತ್ತೋಲೆ ಹೊರಡಿಸಿದ್ದರೂ ಸಂಸ್ಥೆಯು ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಏಕೆ ಬಂಧಿಸಲಿಲ್ಲ ಎಂದು ಪ್ರಶ್ನಿಸಿದೆ. ನೋಟಿಸ್ ನೀಡಿದ್ದರೂ ನಟಿಯನ್ನು ಏಕೆ ಬಂಧಿಸಲಿಲ್ಲ? ಒಬ್ಬೊಬ್ಬರಿಗೆ ಒಂದೊಂದು ನೀತಿ ಏಕೆ" ಎಂದು ನ್ಯಾಯಾಧೀಶರು ಪ್ರಶ್ನೆ ಮಾಡಿದ್ದಾರೆ.
ಸುಲಿಗೆ ಪ್ರಕರಣದ ಆರೋಪಿ ಸುಕೇಶ್ ಚಂದ್ರಶೇಖರ್, ನಟಿ ಜಾಕ್ವೆಲಿನ್ ಅವರಿಗೆ 7.14 ಕೋಟಿ ರೂ. ಮೌಲ್ಯದ ಉಡುಗೊರೆ ನೀಡಿದ್ದಾನೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ.