ನವದೆಹಲಿ, ನ 11 (DaijiworldNews/MS): 200 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ನಟಿ ಜಾಕ್ವೆಲಿನ ಫರ್ನಾಂಡೀಸ್ ವಿರುದ್ಧ ದಾಖಲಾಗಿದ್ದಂತ ಪ್ರಕರಣಕ್ಕೆ ಕೋರ್ಟ್ ಮಧ್ಯಂತರ ಜಾಮೀನನ್ನು ವಿಸ್ತರಿಸಿ ಆದೇಶಿಸಿದ್ದು ಸದ್ಯಕ್ಕೆ ರಿಲೀಫ್ ಸಿಕ್ಕಂತಾಗಿದೆ.
ಇಂದು ಮಧ್ಯಂತರ ಜಾಮೀನು ಅರ್ಜಿಯ ವಿಸ್ತರಣೆ ಕುರಿತಂತೆ ಸಲ್ಲಿಸಿದ್ದಂತ ದಾಖಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ದೆಹಲಿಯ ಪಾಟಿಯಾಲ ಹೌಸ್ ಕೋರ್ಟ್ ಜಾಕ್ವೆಲಿನ್ ಫರ್ನಾಂಡಿಸ್ ಅವರ ಮಧ್ಯಂತರ ಜಾಮೀನನ್ನು ನವೆಂಬರ್ 15 ರವರೆಗೆ ವಿಸ್ತರಿಸಿದೆ.
ಬೆಂಗಳೂರು ಮೂಲದ ಸುಕೇಶ್ ಚಂದ್ರಶೇಖರ್ ಎಂಬಾತ ನಡೆಸಿರುವ 200 ಕೋಟಿ ರೂಪಾಯಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್ 10 ಕೋಟಿ ಮೌಲ್ಯದ ಉಡುಗೊರೆ ನೀಡಿರುವುದು ತನಿಖೆಯಲ್ಲಿ ಪತ್ತೆಯಾಗಿತ್ತು.
ಸುಲಿಗೆ ಪ್ರಕರಣದ ಹಣದ ಜಾಡು ಹಿಡಿದು ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡೀಸ್ ರನ್ನು ಆರೋಪಿ ಎಂದು ಹೆಸರಿಸಲಾಗಿದೆ.