ತೆಲಂಗಾಣ, ನ 13 (DaijiworldNews/DB): ಟ್ರ್ಯಾಕ್ಟರ್ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಐವರು ಸಾವನ್ನಪ್ಪಿದ ಘಟನೆ ತೆಲಂಗಾಣದ ಸೂರ್ಯಪೇಟ್ನ ಮುನಗಲಾ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಮುಂಜಾನೆ ನಡೆದಿದೆ. ಘಟನೆಯಲ್ಲಿ 20 ಮಂದಿ ಗಾಯಗೊಂಡಿದ್ದಾರೆ.
ಟ್ರ್ಯಾಕ್ಟರ್ನಲ್ಲಿ ಕನಿಷ್ಠ 30 ಮಂದಿ ಪ್ರಯಾಣಿಸುತ್ತಿದ್ದರು. ಮುನಗಲ್ ಹೊರ ವಲಯದಲ್ಲಿರುವ ಅಯ್ಯಪ್ಪ ದೇವಳದಲ್ಲಿ ಪೂಜೆ ಮುಗಿಸಿ ಹಿಂತಿರುಗುತ್ತಿದ್ದಾಗ ಘಟನೆ ಸಂಭವಿಸಿದೆ. ಟ್ರ್ಯಾಕ್ಟರ್ ತಪ್ಪು ದಿಕ್ಕಿನಲ್ಲಿ ಬಂದಿದ್ದು, ಅದೇ ವೇಳೆ ವೇಗವಾಗಿ ಬಂದ ಲಾರಿ ಢಿಕ್ಕಿಯಾಗಿದೆ.
ಢಿಕ್ಕಿಯ ರಭಸಕ್ಕೆ ಟ್ರ್ಯಾಕ್ಟರ್ನಲ್ಲಿದ್ದ 30 ಮಂದಿ ರಸ್ತೆಗೆ ಬಿದ್ದಿದ್ದು, ಐವರು ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ. ಮಾಹಿತಿ ಲಭಿಸಿದ ಕೂಡಲೇ ಪೊಲೀಸರು ಸ್ಥಳಕ್ಕಾಗಮಿಸಿದ್ದು, ಸ್ಥಳೀಯರೊಂದಿಗೆ ಸೇರಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಕಳುಹಿಸಲಾಗಿದೆ.