ಮಂಡ್ಯ, ನ 14 (DaijiworldNews/HR): ರಸ್ತೆ ಗುಂಡಿ ತಪ್ಪಿಸಲು ಹೋಗಿ ನಿವೃತ್ತ ಯೋಧರೊಬ್ಬರು ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ನಿವೃತ್ತ ಯೋಧರನ್ನು ಎಸ್.ಎನ್ ಕುಮಾರ್ (39) ಎಂದು ಗುರುತಿಸಲಾಗಿದೆ.
ರಸ್ತೆ ಗುಂಡಿ ತಪ್ಪಿಸಲು ಪ್ರಯತ್ನಿಸುತ್ತಿದ್ದಾಗ ಬೈಕ್ ನಿಯಂತ್ರಣ ತಪ್ಪಿ ಇನ್ನೊಂದು ಬೈಕ್ಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದು, ಕೆಳಗೆ ಬಿದ್ದಿದ್ದ ಕುಮಾರ್ ಮೇಲೆ ಹಿಂದಿನಿಂದ ಬಂದ ಲಾರಿ ಹತ್ತಿದ್ದು ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಘಟನೆಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದು, ರಸ್ತೆ ಗುಂಡಿಗಳನ್ನು ಮುಚ್ಚಿ ಜನರ ಜೀವ ಉಳಿಸಲು ಆಗ್ರಹಿಸಿದ್ದಾರೆ.