ಕಲಬುರ್ಗಿ,ನ 14 (DaijiworldNews/MS): ಸೇಡಂ ಪಟ್ಟಣದಲ್ಲಿ ಬಿಜೆಪಿ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಮಲ್ಲಿಕಾರ್ಜುನ್ ಮುತ್ಯಾಲ(64) ಕೊಲೆಯಾದವರು. ಬಿಜೆಪಿ ಮುಖಂಡರೂ ಆಗಿದ್ದ ಮಲ್ಲಿಕಾರ್ಜುನ್ ಅವರು ಸೇಡಂ ಪಟ್ಟಣದಲ್ಲಿ ಎಲೆಕ್ಟ್ರಾನಿಕ್ ಮತ್ತು ಟಿವಿ ಶಾಪ್ ಇಟ್ಟುಕೊಂಡಿದ್ದರು.
ಅಂಗಡಿಯಲ್ಲಿದ್ದಾಗಲೇ ಇಂದು ಬೆಳಗ್ಗೆ್ ದುಷ್ಕ್ರಮಿಗಳು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಮರ್ಮಾಂಗಕ್ಕೆ ಚಾಕು ಇರಿದು , ಕತ್ತಿಗೆ ಹಗ್ಗ ಬಿಗಿದು ಕೊಲೆ ಮಾಡಿದ್ದಾರೆ.
ಸ್ಥಳಕ್ಕೆ ಸೇಡಂ ಠಾಣೆ ಪೊಲೀಸರು ಬಂದು ಪರಿಶೀಲನೆ ನಡೆಸುತ್ತಿದ್ದಾರೆ.