ಗೋದಾವರಿ, ನ 15 (DaijiworldNews/DB): ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಭಾರೀ ಸ್ಪೋಟ ಸಂಭವಿಸಿ ಮೂವರು ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನ ಮಹಿಧರ್, ರತ್ನಬಾಬು ಮತ್ತು ಸತ್ಯನಾರಾಯಣ ಎಂದು ಗುರುತಿಸಲಾಗಿದೆ. ದೇವರಪಲ್ಲಿ ಮಂಡಲದ ಗೌರಿಪಟ್ಟಣಂನಲ್ಲಿ ಘಟನೆ ನಡೆದಿದೆ.
ರಾಸಾಯನಿಕ ವಸ್ತುಗಳನ್ನು ತಯಾರಿಸುವ ಕಾರ್ಖಾನೆ ಇದಾಗಿದ್ದು, ಸ್ಪೋಟಕ್ಕೆ ಕಾರಣವೇನೆಂದು ತಿಳಿದು ಬಂದಿಲ್ಲ. ಇನ್ನು ಸ್ಪೋಟದಲ್ಲಿ ಗಾಯಗೊಂಡವರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.