ನವದೆಹಲಿ, ನ 15 (DaijiworldNews/HR): ಗುಜರಾತ್ನ ಸರಕಾರಿ ಕಚೇರಿಗಳಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ವಿಧಾನ ಸಭೆ ಚುನಾವಣೆ ಮುಗಿಯುವವರೆಗೆ ತೆಗೆಯಲು ಅಥವಾ ಅವುಗಳನ್ನು ಮುಚ್ಚಲು ನಿರ್ದೇಶನ ನೀಡುವಂತೆ ಆಮ್ ಆದ್ಮಿ ಪಕ್ಷ ಚುನಾವಣಾ ಆಯೋಗವನ್ನು ಆಗ್ರಹಿಸಿದೆ.
ಮೋದಿ ಅವರ ಭಾವಚಿತ್ರವನ್ನು ತೆಗೆಯಲು ಆಮ್ ಆದ್ಮಿ ಪಕ್ಷದ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಪುನೀತ್ ಜುನೇಜಾ ಅವರು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ್ದಾರೆ.
ಇನ್ನು ನರೇಂದ್ರ ಮೋದಿ ಅವರು ಬಿಜೆಪಿಯ ಸ್ಟಾರ್ ಪ್ರಚಾರಕರು. ಗುಜರಾತ್ನಲ್ಲಿರುವ ಕೇಂದ್ರ ಹಾಗೂ ರಾಜ್ಯ ಸರಕಾರದ ಕಚೇರಿಗಳಲ್ಲಿರುವ ಅವರ ಭಾವಚಿತ್ರಗಳು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಹೇಳಿದೆ.
ಗುಜರಾತ್ ವಿಧಾನ ಸಭೆ ಚುನಾವಣೆ ಡಿಸೆಂಬರ್ 1 ಹಾಗೂ ಡಿಸೆಂಬರ್ 5ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ಮತ ಎಣಿಕೆ ಡಿಸೆಂಬರ್ 8ರಂದು ನಡೆಯಲಿದೆ.