ನವದೆಹಲಿ, ನ 16 (DaijiworldNews/MS): ಗುಜರಾತ್ ನ ಮುಂಬರುವ ವಿಧಾನಸಭಾ ಚುನಾವಣೆಗಾಗಿ, ಕೇರಳ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ತಮ್ಮ ಪಕ್ಷದ ಪರವಾಗಿ ಪ್ರಚಾರದಿಂದ ಹಿಂದೆ ಸರಿದಿದ್ದಾರೆ ಎಂದು ವರದಿಯಾಗಿದೆ.
ಗುಜರಾತ್ನ ಪಕ್ಷದ "ಸ್ಟಾರ್ ಪ್ರಚಾರಕರ ಪಟ್ಟಿ"ಯಿಂದ ಶಶಿ ತರೂರ್ ಹೆಸರು ಕೈ ಬಿಟ್ಟಿದ್ದಕ್ಕೆ ಅವರು ಪಕ್ಷದ ಪರವಾಗಿ ಪ್ರಚಾರ ಮಾಡದಿರಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.
ಗುಜರಾತ್ನಲ್ಲಿ ಪ್ರಚಾರ ಮಾಡಲು ಕಾಂಗ್ರೆಸ್ನ ವಿದ್ಯಾರ್ಥಿ ಸಂಘದಿಂದ ತರೂರ್ ಅವರನ್ನು ಆಹ್ವಾನಿಸಲಾಗಿತ್ತು, ಆದರೆ ಅವರು ಪ್ರಚಾರದಿಂದ ಹಿಂದೆ ಸರಿದಿದ್ದು, ಬರಲು ನಿರಾಕರಿಸಿದ್ದಾರೆ.
ಕಾಂಗ್ರೆಸ್ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಪಕ್ಷದ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಿದಾಗಿನಿಂದ ಶಶಿ ತರೂರ್ ಅವರನ್ನು ಪಕ್ಷದಿಂದ ದೂರವಿಡಲಾಗಿದೆ ಎಂದು ಹೇಳುತ್ತಿದೆ. ಆದರೆ, ಕಾಂಗ್ರೆಸ್ ಪಕ್ಷ ತರೂರ್ ಅವರನ್ನು ಕಡೆಗಣಿಸಿರುವುದನ್ನು ನಿರಾಕರಿಸಿದೆ.
ಗುಜರಾತ್ ವಿಧಾನಸಭಾ ಚುನಾವಣೆಗೆಕಾಂಗ್ರೆಸ್ 40 ಮಂದಿಯನ್ನು ಸ್ಟಾರ್ ಪ್ರಚಾರಕರನ್ನಾಗಿ ಆಯ್ಕೆ ಮಾಡಿದೆ. ಈ ಪ್ರಚಾರಕರ ಪಟ್ಟೀಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಮಾಜಿ ಮುಖ್ಯಸ್ಥರಾದ ಸೋನಿಯಾ ಗಾಂಧಿ ರಾಹುಲ್ ಗಾಂಧಿ ಮತ್ತು ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಸೇರಿದ್ದಾರೆ
ಆದರೆ ಪಕ್ಷದ ಭಾರತ್ ಜೋಡೋ ಯಾತ್ರೆಯ ನೇತೃತ್ವ ವಹಿಸಿರುವ ರಾಹುಲ್ ಗಾಂಧಿ, ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಚುನಾವಣಾ ಪ್ರಚಾರ ನಡೆಸಿಲ್ಲ.