ಬೆಂಗಳೂರು, ನ 17 (DaijiworldNews/HR): ಭಾರತೀಯ ತಟ ರಕ್ಷಣ ಪಡೆ (ಕೋಸ್ಟ್ಗಾರ್ಡ್)ಗೆ ಸೇರ್ಪಡೆಗೊಳ್ಳಲಿರುವ ಬೆಂಗಳೂರಿನ ಎಚ್ಎಎಲ್ ನಿರ್ಮಿತ ಅತ್ಯಾಧುನಿಕ ಹಗುರ ಹೆಲಿಕಾಪ್ಟರ್(ಎಎಲ್ಎಚ್) ಸಿಜಿ 870 ಸ್ವೀಕಾರ ಸಮಾರಂಭ ಬೆಂಗಳೂರಿನ ಎಚ್ಎಎಲ್ನಲ್ಲಿ ನಡೆದಿದೆ.
ಅತ್ಯಾಧುನಿಕ ಹಗುರ ಹೆಲಿಕಾಪ್ಟರ್ ಚೆನ್ನೈಯಲ್ಲಿ ಸೇವೆಗೆ ಸೇರ್ಪಡೆಗೊಳ್ಳಲಿದ್ದು, ಇದರೊಂದಿಗೆ ಎಚ್ಎಎಲ್ನೊಂದಿಗೆ ತಟರಕ್ಷಣ ಪಡೆ 2017ರ ಮಾ. 29ರಲ್ಲಿ ನಡೆಸಿದ ಒಪ್ಪಂದ ಮುಕ್ತಾಯಗೊಳ್ಳಲಿದೆ.
ಕಳೆದೆರಡು ದಶಕಗಳಲ್ಲಿ ಭಾರತೀಯ ಸಮುದ್ರ ತಟರಕ್ಷಣೆಯಲ್ಲಿ ಮಹತ್ವದ ಬೆಳವಣಿಗೆಗಳಾಗಿವೆ. ಕಣ್ಗಾವಲು, ಗುಪ್ತಚರ ಮಾಹಿತಿ ಸಂಗ್ರ ಮತ್ತು ಸಂಬಂಧಿಸಿದ ಭದ್ರತಾ ಸಂಸ್ಥೆಗಳೊಂದಿಗೆ ಮಾಹಿತಿ ವಿನಿಮಯ, ತುರ್ತು ಸಂದರ್ಭದಲ್ಲಿ ಪರಿಣಾಮಕಾರಿ ಸ್ಪಂದನೆ ಮಾಡಲಾಗುತ್ತಿದ್ದು, ತಟರಕ್ಷಣ ಪಡೆಯ ಜವಾಬ್ದಾರಿಗಳು ಹೆಚ್ಚಿರುವುದರಿಂದ ನಾಲ್ಕು ಎಎಲ್ಎಚ್ ಎಂಕೆ -3 ಹೆಲಿಕಾಪ್ಟರ್ಗಳ ಸೇರ್ಪಡೆ ಮಿಷನ್ ಆರಂಭಿಸಲಾಗಿದೆ ಎಂದು ಭಾರತೀಯ ತಟರಕ್ಷಣ ಪಡೆ (ಪೂರ್ವ ವಿಭಾಗ) ಯ ಮಹಾನಿರ್ದೇಶಕ ವಿ.ಎಸ್. ಪಠಾನಿಯಾ ಹೇಳಿದ್ದಾರೆ.