ನವದೆಹಲಿ, ನ 17 (DaijiworldNews/DB): ಹುಬ್ಬಳ್ಳಿ ಮೂಲದ ಮಹಿಳೆಯೊಬ್ಬರು ದೆಹಲಿ ವಿಮಾನ ನಿಲ್ದಾಣದಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ ವಿದ್ಯಾಮನ ನಡೆದಿದೆ.
ಹುಬ್ಬಳ್ಳಿಗೆ ತೆರಳುವುಕ್ಕಾಗಿ ತುಂಬು ಗರ್ಭಿಣಿ ಮಹಿಳೆ ದೆಹಲಿ ವಿಮಾನ ನಿಲ್ದಾಣಕ್ಕೆ ಮಂಗಳವಾರ ಪತಿಯೊಂದಿಗೆ ಆಗಮಿಸಿ ವಿಮಾನಕ್ಕಾಗಿ ಕಾಯುತ್ತಿದ್ದರು. ವಿಮಾನ ನಿಲ್ದಾಣದ ಟರ್ಮಿನಲ್ 3ರಲ್ಲಿದ್ದ ಅವರು ಸಂದರ್ಭದಲ್ಲಿ ಶೌಚಾಲಯಕ್ಕೆ ತೆರಳಿದ್ದ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿತು. ತತ್ಕ್ಷಣ ಅಲ್ಲೇ ಇದ್ದ ಹೆರಿಗೆ ವಾರ್ಡ್ಗೆ ಅವರನ್ನು ಕರೆದೊಯ್ಯಲಾಯಿತು. ಬಳಿಕ ಅವರು ಗಂಡು ಮಗುವಿಗೆ ಜನ್ಮ ನೀಡಿದರು.
ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ ದು ಡಾ.ಪ್ರವೀಣ್ ಸಿಂಗ್ ತಿಳಿಸಿದ್ದಾರೆ. ಬಳಿಕ ಸನಿಹದ ಖಾಸಗಿ ಆಸ್ಪತ್ರೆಗೆ ಇಬ್ಬರನ್ನು ದಾಖಲಿಸಲಾಯಿತು ಎಂದು ತಿಳಿದು ಬಂದಿದೆ.