ಬೆಂಗಳೂರು, ನ. 17 (DaijiworldNews/SM): ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿದಂತೆ ಕರ್ನಾಟಕ ರಾಜ್ಯ ಶ್ರೀಗಂಧ ನೀತಿ-2022ಕ್ಕೆ ಗುರುವಾರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿದ ಆರೋಗ್ಯ ಸಚಿವ ಸುಧಾಕರ್ ಅವರು, ಶ್ರೀಗಂಧ ನೀತಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರಿಂದ ರೈತರು ಖಾಸಗಿ ಜಮೀನಿನಲ್ಲಿ ಶ್ರೀಗಂಧವನ್ನು ಬೆಳೆಸಿ ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅವಕಾಶ ಸಿಗಲಿದೆ ಎಂದರು.