ನವದೆಹಲಿ, ನ 18 (DaijiworldNews/DB): ಫಾರೂಕ್ ಅಬ್ದುಲ್ಲ ಅವರು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮುಂದೆ ಒಮರ್ ಅಬ್ದುಲ್ಲ ಅವರು ಅಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿಕೊಳ್ಳುವ ಸಾಧ್ಯತೆ ಇದೆ.
ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಾರಣ ಅವರ ಪುತ್ರ ಒಮರ್ ಅಬ್ದುಲ್ಲ ತಂದೆಯ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಮುಂದಾಗಿದ್ದಾರೆ. ಇಬ್ಬರಿಗೂ ಜಮ್ಮು ಕಾಶ್ಮೀರದ ಮುಖ್ಯಮಂತ್ರಿಯಾಗಿ ಅನುಭವವಿದೆ.
ಆದರೆ ಫಾರೂಕ್ ಅಬ್ದುಲ್ಲ ಅವರ ರಾಜೀನಾಮೆಗೆ ಕಾರಣ ತಿಳಿದು ಬಂದಿಲ್ಲ. ಪುತ್ರನಿಗೆ ಜವಾಬ್ದಾರಿ ವಹಿಸುವ ಸಲುವಾಗಿ ಅವರು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಸ್ಥಾನವನ್ನು ತ್ಯಜಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.