ಖೋಪೋಲಿ (ಮಹಾರಾಷ್ಟ್ರ), ನ 18 (DaijiworldNews/DB): ಕಾರು ಮತ್ತು ಇನ್ನೊಂದು ವಾಹನದ ನಡುವೆ ಢಿಕ್ಕಿ ಸಂಭವಿಸಿ ಐವರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಖೋಪೋಲಿ ಪ್ರದೇಶದ ಬಳಿ ಮುಂಬೈ ಪುಣೆ ಎಕ್ಸ್ಪ್ರೆಸ್ ವೇಯಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ.
ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಇನ್ನೋರ್ವ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದರು. ಗಾಯಾಳುಗಳನ್ನು ಕಾಮೋಥೆಯ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.