ಇಂಧೋರ್, ನ 18 (DaijiworldNews/HR): ಭಾರತ್ ಜೋಡೋ ಯಾತ್ರೆ ಮಧ್ಯಪ್ರದೇಶಕ್ಕೆ ಆಗಮಿಸುವ ಮುನ್ನ ಇಂದೋರ್ನಲ್ಲಿ ರಾಹುಲ್ ಗಾಂಧಿ ಹೆಸರಿನಲ್ಲಿ ಬೆದರಿಕೆ ಪತ್ರ ಬಂದಿರುವುದು ಸಂಚಲನ ಮೂಡಿಸಿದೆ.
ಪತ್ರದಲ್ಲಿ ರಾಹುಲ್ ಗಾಂಧಿಗೆ ಕೊಲೆ ಬೆದರಿಕೆ ಹಾಕಲಾಗಿದ್ದು, ಪೊಲೀಸರು ಇದೀಗ ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ.
ಶುಕ್ರವಾರ ಬೆಳಗ್ಗೆ ಸಿಹಿ ಅಂಗಡಿಯೊಂದರ ಹೊರಗೆ ಅಪರಿಚಿತ ವ್ಯಕ್ತಿಯೊಬ್ಬರು ಬೆದರಿಕೆ ಪತ್ರವನ್ನು ಬಿಟ್ಟು ಹೋಗಿದ್ದರು ಎಂದು ತಿಳಿದುಬಂದಿದೆ.
ಇನ್ನು ಸಮೀಪದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಆರೋಪಿಗಾಗಿ ಶೋಧ ಆರಂಭಿಸಿದ್ದಾರೆ.