ಮಹಾರಾಷ್ಟ್ರ, ನ 18 (DaijiworldNews/DB): ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯ ಶೇಗಾಂವ್ನಲ್ಲಿ ಇಂದು ಬೆಳಗ್ಗೆ ನಡೆದ ಭಾರತ್ ಜೋಡೋ ಯಾತ್ರೆಯಲ್ಲಿ ಮಹಾತ್ಮ ಗಾಂಧಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ ರಾಹುಲ್ ಗಾಂಧಿಯವರೊಂದಿಗೆ ಹೆಜ್ಜೆ ಹಾಕಿದರು.
ಇನ್ನು ತುಷಾರ್ ಗಾಂಧಿ ಯಾತ್ರೆಯಲ್ಲಿ ಪಾಲ್ಗೊಂಡಿರುವುದನ್ನು ಐತಿಹಾಸಿಕ ಎಂದು ಕಾಂಗ್ರೆಸ್ ಬಣ್ಣಿಸಿದೆ. ದಿವಂಗತ ನಾಯಕರ ಪರಂಪರೆಯ ವಾಹಕಗಳಾಗಿ ಜವಾಹರಲಾಲ್ ನೆಹರೂ ಮತ್ತು ಮಹಾತ್ಮ ಗಾಂಧಿ ಮರಿ ಮೊಮ್ಮಕ್ಕಳಾದ ರಾಹುಲ್ ಗಾಂಧಿ ಮತ್ತು ತುಷಾರ್ ಗಾಂಧಿ ಅವರಿಬ್ಬರು ಕಾಣುತ್ತಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.
ಇದಕ್ಕೂ ಮೊದಲು ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳುವ ಮೊದಲು ಗುರುವಾರವೇ ಟ್ವೀಟ್ ಮಾಡಿ ಮಾಹಿತಿ ನೀಡಿರುವ ತುಷಾರ್ ಗಾಂಧಿ, ಶೇಗಾಂವ್ನಲ್ಲಿ ನವೆಂಬರ್ 18 ರಂದು ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುತ್ತೇನೆ. ಶೇಗಾಂವ್ ನನ್ನ ಜನ್ಮಸ್ಥಳ ಕೂಡಾ ಆಗಿದೆ ಎಂದಿದ್ದರು.