ಶಿವಮೊಗ್ಗ, ನ 18 (DaijiworldNews/HR): ಸೋಲಿನ ಭಯದಿಂದ ಕಾಂಗ್ರೆಸ್ ಪಕ್ಷವು ಬಿಜೆಪಿ ವಿರುದ್ದ ಆರೋಪಗಳನ್ನು ಮಾಡುತ್ತಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಮತದಾರ ಪಟ್ಟಿಯಲ್ಲಿ ಅಕ್ರಮ ಕಾಂಗ್ರೆಸ್ ನಾಯಕರು ಆರೋಪದ ವಿಚಾರಕ್ಕೆ ಪ್ರತಿಕ್ರಿಯಿಸಿ ಬಿಎಸ್ವೈ, ಮತದಾರರ ಪಟ್ಟಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಕಾಂಗ್ರೆಸ್ಸಿಗರ ಆರೋಪದಲ್ಲಿ ಸತ್ಯಾಂಶವಿಲ್ಲ ಎಂದರು.
ಇನ್ನು ಸಿಎಂ ಬಸವರಾಜ ಬೊಮ್ಮಾಯಿ ತನಿಖೆ ನಡೆಸಲು ಸಿದ್ಧವಿರುವುದಾಗಿ ಹೇಳಿದ್ದಾರೆ. ಕಾಂಗ್ರೆಸ್ ನಾಯಕರು ಅಕ್ರಮಗಳ ಬಗ್ಗೆ ದಾಖಲೆ ಇದ್ದರೆ ಕೊಡಲಿ, ತನಿಖೆ ನಡೆಸುತ್ತೇವೆ. ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಸೋಲಿನ ಭಯದಿಂದ ಈ ರೀತಿ ಆರೋಪಗಳನ್ನು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.