ರಾಜಸ್ಥಾನ, ನ 21 (DaijiworldNews/DB): ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 125 ಸೀಟುಗಳನ್ನು ಗೆಲ್ಲಲಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್-19 ಸಾಂಕ್ರಾಮಿಕ ರೋಗ ಮತ್ತು ಆರ್ಥಿಕತೆಯನ್ನು ಬಿಜೆಪಿ ಸರಿಯಾಗಿ ನಿರ್ವಹಿಸದ ಕಾರಣ ಹಲವಾರು ಸಮಸ್ಯೆಗಳು ಸೃಷ್ಟಿಯಾಗಿವೆ. ಇದರಿಂದಲೇ ಬಿಜೆಪಿ ವಿರುದ್ದ ಜನ ಇದ್ದಾರೆ. ಕಾಂಗ್ರೆಸ್ ಈ ಬಾರಿಯ ಗುಜರಾತ್ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ನಿಶ್ಚಿತ ಎಂದರು.
ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬಳಿಕ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ನಿರಂತರವಾಗಿ ಗುಜರಾತ್ಗೆ ಭೇಟಿ ನೀಡುತ್ತಿದ್ದಾರೆ. ವಾರಕ್ಕೊಮ್ಮೆ ಭೇಟಿ ನೀಡುವುದು ಅವರ ದಿನಚರಿಯಾದಂತಾಗಿದೆ. ಬಿಜೆಪಿ ಅಲ್ಲಿ ಸೋಲಲಿದೆ ಎಂಬುದು ಇದರಿಂದ ತಿಳಿದು ಬರುತ್ತದೆ ಎಂದವರು ತಿಳಿಸಿದರು.