ಅಯೋಧ್ಯೆ (ಯುಪಿ), ನ 21 (DaijiworldNews/DB): ಮಾರಿಷಸ್ ಅಧ್ಯಕ್ಷ ಪೃಥ್ವಿರಾಜ್ಸಿಂಗ್ ರೂಪನ್ ಅವರು ಪತ್ನಿ ಸಮೇತ ಸೋಮವಾರ ಅಯೋಧ್ಯೆಗೆ ಭೇಟಿ ನೀಡಿದ್ದಾರೆ.
ಪತ್ನಿ ಸಂಯುಕ್ತಾ ರೂಪುನ್ ಮತ್ತು ಅಧಿಕಾರಿಗಳೊಂದಿಗೆ ಬೆಳಗ್ಗೆ 9 ಗಂಟೆಗೆ ರೂಪನ್ ಅವರು ಲಕ್ನೋದಿಂದ ರಸ್ತೆ ಮಾರ್ಗವಾಗಿ ಅಯೋಧ್ಯೆಗೆ ಬಂದಿಳಿದರು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಳಿಕ ಹನುಮಾನ್ ಗರ್ಹಿ ದೇವಸ್ಥಾನ, ಕನಕ ಭವನ ದೇವಸ್ಥಾನ ಮತ್ತು ನಿರ್ಮಾಣ ಹಂತದಲ್ಲಿರುವ ರಾಮಮಂದಿರಕ್ಕೆ ಭೇಟಿ ನೀಡಿದ ಅವರು ಅಲ್ಲಿನ ಪ್ರಮುಖರೊಂದಿಗೆ ಮಾತುಕತೆ ನಡೆಸಿದರು. ಅಯೋಧ್ಯೆ ರಾಮಜನ್ಮಭೂಮಿಯಲ್ಲಿ ದೇವಸ್ಥಾನ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಈ ಕುರಿತು ರೂಪನ್ ಅವರಿಗೆ ಮಾಹಿತಿ ನೀಡಲಾಯಿತು. ಬಳಿಕ ಸರಯೂ ನದಿ ದಡಕ್ಕೂ ಅವರು ಭೇಟಿ ನೀಡಿದರು ಎಂದು ತಿಳಿದು ಬಂದಿದೆ.