ಬೆಂಗಳೂರು, ನ 23 (DaijiworldNews/MS):ಮಾಜಿ ಸ್ವೀಕರ್ ರಮೇಶ್ ಕುಮಾರ್ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವಾಚ್ಯ ಪದದಲ್ಲಿ ನಿಂದಿಸಿದ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿರುವ ಇದರ ಬೆನ್ನಲ್ಲೇ ಹೆಚ್ ಡಿಕೆ ಕ್ಷಮೆ ಯಾಚಿಸಿದ್ದಾರೆ.
ಶ್ರೀನಿವಾಸಪುರ ತಾಲ್ಲೂಕು ಮಾಸ್ತೇನಹಳ್ಳಿ ಗ್ರಾಮದಲ್ಲಿ ಶಿಥಿಲವಾದ ಸರ್ಕಾರಿ ಶಾಲೆ ವೀಕ್ಷಣೆಗೆ ಕುಮಾರಸ್ವಾಮಿ ನ, ೨೨ ರಂದು ಆಗಮಿಸಿದ್ದು, ವೀಕ್ಷಣೆಯ ಬಳಿಕ ಕಾರು ಹತ್ತುವ ವೇಳೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ವಿರುದ್ಧ ಕುಮಾರಸ್ವಾಮಿ "ಅಷ್ಟುದ್ದ ಭಾಷಣ ಮಾಡ್ತಾನೆ ಸೂ…ಮಗ" ಎಂದು ಆಕ್ರೋಶ ವ್ಯಕ್ತಡಿಸಿದ್ದರು, ಇದರ ವಿಡಿಯೋ ವೈರಲ್ ಆಗುತ್ತಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮಾಜಿ ಸ್ವೀಕರ್ ರಮೇಶ್ ಕುಮಾರ್ ಅವರಿಗೆ ನಾನು ಬಳಸಿದೆ ಎನ್ನಲಾದ ಪದ ಸ್ವತಃ ನನಗೂ ನೋವುಂಟು ಮಾಡಿದೆ, ಆ ಪದ ಬಳಕೆ ನನ್ನ ಜಾಯಮಾನವಲ್ಲ, ನನ್ನ ವ್ಯಕ್ತಿತ್ವವೂ ಅಲ್ಲ. ಆ ಮಾತಿನಿಂದ ರಮೇಶ್ ಕುಮಾರ್ ಅವರಿಗಾಗಲಿ, ಅಥವಾ ಇನ್ಯಾರಿಗಾಗಲಿ ನೋವಾಗಿದ್ದರೆ ನನ್ನ ವಿಷಾದವಿದೆ. ಈ ಮಾತನ್ನು ಹಿಂಪಡೆಯುತ್ತಿದ್ದೇಬೆ , ಶಾಲಾ ಮಕ್ಕಳ ಕಣ್ಣೀರು ನನ್ನ ಸಿಟ್ಟಿಗೆ ಕಾರಣವಾಯಿತು ಎಂದು ಹೇಳಿದ್ದಾರೆ.