ಬೆಂಗಳೂರು, ನ 23 (DaijiworldNews/MS):ಪಿಎಸ್ಐ ನೇಮಕಾತಿ ಹಗರಣದ ಆರೋಪಿ, ಐಪಿಎಸ್ ಅಧಿಕಾರಿ ಅಮೃತ್ ಪಾಲ್ಗೆ ಜಾಮೀನು ಅರ್ಜಿ ಮತ್ತೆ ವಜಾಗೊಂಡಿದೆ. ಬೆಂಗಳೂರಿನ 24ನೇ ಸಿಸಿಹೆಚ್ ನ್ಯಾಯಾಲಯದ ನ್ಯಾ.ಕೆ. ಲಕ್ಷ್ಮಿ ನಾರಾಯಣ ಭಟ್ ಅವರು ಜಾಮೀನು ತಿರಸ್ಕರಿಸಿ ಬುಧವಾರ ಆದೇಶ ಹೊರಡಿಸಿದರು.
ಜಾಮೀನು ಅರ್ಜಿಗೆ ಸಿಐಡಿ ಪರವಾಗಿ ವಾದ ಮಂಡನೆ ಮಾಡಿದ ಎಸ್ಪಿಪಿ ಪ್ರಸನ್ನ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದರು. ಪಿಎಸ್ಐ ನೇಮಕಾತಿಯ ಉಸ್ತುವಾರಿ ವಹಿಸಿದ್ದ ಅಮೃತ್ ಪಾಲ್, ಸೇಫ್ ಲಾಕರ್ನ ಕೀ ಅಮೃತ್ ಪಾಲ್ ಬಳಿಯಿತ್ತು. ಕಿರಿಯ ಅಧಿಕಾರಿಗಳಿಗೆ ಕೀ ಕೊಟ್ಟು ದುರುಪಯೋಗ ಮಾಡಲಾಗಿದೆ. ಪ್ರಕರಣದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಆರೋಪಿಗೆ ಜಾಮೀನು ನೀಡಬಾರದು ಎಂದು ವಾದಿಸಿದರು.ಈ ವಾದ-ಪ್ರತಿವಾದ ಆಲಿಸಿದ ನ್ಯಾ.ಕೆ.ಲಕ್ಷ್ಮಿನಾರಾಯಣ ಭಟ್, ಅಮೃತ್ ಪೌಲ್ ಜಾಮೀನು ಅರ್ಜಿ ವಜಾಗೊಳಿಸಿ ಆದೇಶಿಸಿದರು
545 ಪಿಎಸ್ಐ ಹುದ್ದೆಗಳ ನೇಮಕಾತಿ ಹಗರಣದಲ್ಲಿಆರೋಪಿಯಾಗಿರುವ ಅಮೃತ್ ಪಾಲ್ ನೇಮಕಾತಿ ನಡೆಯುವ ಸಂದರ್ಭದಲ್ಲಿ "ನೇಮಕಾತಿ ವಿಭಾಗ"ದ ಎಡಿಜಿಪಿಯಾಗಿದ್ದರು.