ಚೆನ್ನೈ, ನ 24 (DaijiworldNews/HR): ಬಹುಭಾಷಾ ನಟ, ಉಳಗನಾಯಕನ್ ಕಮಲ್ ಹಾಸನ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಶ್ರೀರಾಮಚಂದ್ರ ಮೆಡಿಕಲ್ ಸೆಂಟರ್(ಎಸ್ ಆರ್ ಎಂಸಿ)ಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.
ಜ್ವರದಿಂದ ಬಳಲುತ್ತಿರುವ ಕಮಲ್ ಹಾಸನ್ ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಇನ್ನು ಕಮಲ್ ಹಾಸನ್ ಅವರು ಇಂದು ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.