ಮುಂಬೈ, ನ 24 (DaijiworldNews/HR): ನಟಿ ಜಾಕ್ವೆಲಿನ್ ಫರ್ನಾಂಡೀಸ್ ವಿರುದ್ಧದ ಸುಕೇಶ್ ಚಂದ್ರಶೇಖರ್ ಅವರ 200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ವಿಚಾರಣೆಯನ್ನು ಡಿ. 12ಕ್ಕೆ ಪಟಿಯಾಲ ಹೌಸ್ ಕೋರ್ಟ್ ಮುಂದೂಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪಟಿಯಾಲ ಹೌಸ್ ಕೋರ್ಟ್ಗೆ ವಾದ ಮಂಡಿಸಲು ನಟಿ ಜಾಕ್ವೆಲಿನ್ ಫರ್ನಾಂಡೀಸ್ ಇಂದು ಆಗಮಿಸಿದ್ದರು. ಆದರೆ ನ್ಯಾಯಾಲಯದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಹಾಗಾಗಿ ವಿಚಾರಣೆಯನ್ನು ಡಿಸೆಂಬರ್ 12ಕ್ಕೆ ಮುಂದೂಡಿದೆ ಎಂದು ತಿಳಿದು ಬಂದಿದೆ.
ಇನ್ನು ದರೋಡೆಕೋರ ಸುಖೇಶ್ ಚಂದ್ರಶೇಖರ್ಗೆ ಸಂಬಂಧಿಸಿದ 200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯವು ನವೆಂಬರ್ 15 ರಂದು ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ಗೆ ಜಾಮೀನು ನೀಡಿತ್ತು.