ಚಿಕ್ಕಬಳ್ಳಾಪುರ, ನ 24 (DaijiworldNews/HR): ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ವಿರುದ್ಧ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್.ಆಂಜನೇಯ ರೆಡ್ಡಿ ಅವರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕ್ರಿಮಿನಲ್ ಪ್ರಕರಣ ದಾಖಲಿಸಲು ಆದೇಶಿಸಿದ್ದು, ಸಮನ್ಸ್ ನೀಡಿದೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಸುಧಾಕರ್ ಅವರನ್ನು ನೇಮಿಸಲಾಗಿದ್ದು, ಇವರ ಅರ್ಹತೆ ಮತ್ತು ಮಾನದಂಡ ಪ್ರಶ್ನಿಸಿ ಆಂಜನೇಯ ರೆಡ್ಡಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.
ಇನ್ನು ಮಾನನಷ್ಟ ಪ್ರಕರಣವನ್ನು ಕ್ರಿಮಿನಲ್ ಪ್ರಕರಣ ಎಂದು ಪರಿಗಣಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಈ ಆಧಾರದಲ್ಲಿ ಆಂಜನೇಯ ರೆಡ್ಡಿ, ಸುಧಾಕರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.