ಬೆಳಗಾವಿ, ನ 25 (DaijiworldNews/MS): ಕರ್ನಾಟಕ ಹಾಗೂ ಮಹಾರಾಷ್ಟ್ರ ನಡುವಿನ ಗಡಿ ವಿವಾದ ಸಂಬಂಧ ಉಭಯ ರಾಜ್ಯಗಳ ನಡುವಿನ ತಿಕ್ಕಾಟ ತೀವ್ರ ಸ್ವರೂಪ ಪಡೆಯುತ್ತಿರಬೇಕಾದರೆ, ಕಿಡಿಗೇಡಿಗಳು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬಸ್ಗೆ ಮಸಿ ಬಳಿದಿರುವ ಘಟನೆ ನಡೆದಿದೆ.
ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ ದೌಂಡ್ ಗ್ರಾಮ ಬಳಿ ಅಖಿಲ ಭಾರತೀಯ ಮರಾಠಾ ಸಂಘದ ಕಾರ್ಯಕರ್ತರು, ಬೆಳಗಾವಿಯ ನಿಪ್ಪಾಣಿ ಡಿಪೋಗೆ ಸೇರಿದ ಕೆಎಸ್ಆರ್ಸಿಟಿ ಬಸ್ಗೆ ಮಸಿ ಬಳಿದು ಪುಂಡಾಟ ಮೆರೆದಿದ್ದಾರೆ.
ಜತ್ತ ತಾಲೂಕಿನ 40 ಗ್ರಾಮ ಕರ್ನಾಟಕಕ್ಕೆ ಸೇರಬೇಕೆಂದು ಠರಾವು ಹೊರಡಿಸಿದ್ದರು ಎಂಬ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿ ಮಹಾರಾಷ್ಟ್ರ ನಮ್ಮ ಹಕ್ಕು ಯಾರಪ್ಪನದಲ್ಲ ಎಂದು ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ.
ಇನ್ನೊಂದೆಡೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಆಕ್ರೋಶ ವ್ಯಕ್ತಪಡಿಸಿದ್ದು, 40 ಹಳ್ಳಿಗಳು ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಹೇಳಿದ್ದಾರೆ.