ನವದೆಹಲಿ, ನ 25 (DaijiworldNews/MS): ಉತ್ತರ ದೆಹಲಿಯ ಚಾಂದ್ನಿ ಚೌಕ್ನ ಭಾಗೀರಥ್ ಪ್ಯಾಲೇಸ್ ಪ್ರದೇಶದಲ್ಲಿರುವ ಹೋಲ್ಸೇಲ್ ಮಾರ್ಕೆಟ್ನಲ್ಲಿ ಗುರುವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು ಸುಮಾರು 50 ಅಂಗಡಿಗಳು ಸುಟ್ಟು ಭಸ್ಮವಾಗಿವೆ.
ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಹರಸಾಹಸಪಡುತ್ತಿದ್ದಾರೆ. 30ರಷ್ಟು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ. ಶುಕ್ರವಾರ ಬೆಳಿಗ್ಗೆಯೂ ಬೆಂಕಿ ನಂದಿಸುವ ಕಾರ್ಯ ಮುಂದುವರಿದಿದೆ.
ಘಟನೆಯಲ್ಲಿ ಯಾವುದೇ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ. ಅಗ್ನಿಶಾಮಕ ದಳದ ಪ್ರಕಾರ, ಗುರುವಾರ ರಾತ್ರಿ 9.19 ಕ್ಕೆ ಬೆಂಕಿಯ ಬಗ್ಗೆ ಕರೆ ಬಂದಿದ್ದು, 40 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದವು. ಇಲ್ಲಿಯವರೆಗೆ ಬೆಂಕಿ ಹತೋಟಿಗೆ ಬಂದಿಲ್ಲ. ಶುಕ್ರವಾರ ಬೆಳಿಗ್ಗೆಯೂ ಬೆಂಕಿ ನಂದಿಸುವ ಕಾರ್ಯ ಮುಂದುವರಿದಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಅಂಗಡಿಯೊಂದರಲ್ಲಿ ಕಾಣಿಸಿಕೊಂಡ ಬೆಂಕಿ ಮಾರುಕಟ್ಟೆಯ ಇತರೆ ಅಂಗಡಿಗಳಿಗೂ ವ್ಯಾಪಿಸಿದೆ ಎನ್ನಲಾಗಿದೆ.