ಛತ್ತೀಸ್ಗಢ, ನ 26 (DaijiworldNews/MS):ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಮಹಿಳೆ ಸೇರಿದಂತೆ ಮೂವರು ನಕ್ಸಲರನ್ನು ಹತರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಿರ್ತುರ್ ಪೊಲೀಸ್ ಠಾಣಾ ವ್ಯಾಪ್ತಿಯ ಪೊಮ್ರಾ ಅರಣ್ಯ ಪ್ರದೇಶದಲ್ಲಿ ಶನಿವಾರ ಬೆಳಿಗ್ಗೆ ಸುಮಾರು 7.30ಕ್ಕೆ ನಕ್ಸಲರು ಮತ್ತು ಭದ್ರತಾ ಪಡೆ ನಡುವೆ ಗುಂಡಿನ ಕಾಳಗ ನಡೆದಿದೆ ಎಂದು ಪೊಲೀಸ್ ಮಹಾನಿರೀಕ್ಷಕ ಸುಂದರ್ ರಾಜ್ ಪಿ ತಿಳಿಸಿದರು.
ಕಾರ್ಯಾಚರಣೆ ಮುಗಿದ ಬಳಿಕ ಘಟನಾ ಸ್ಥಳದಲ್ಲಿ ಓರ್ವ ಮಹಿಳೆ ಸೇರಿದಂತೆ ಮೂವರು ನಕ್ಸಲರ ಮೃತದೇಹಗಳು ಸಿಕ್ಕಿವೆ. ಈ ಪ್ರದೇಶದಲ್ಲಿ ಶೋಧ ಕಾರ್ಯ ಮುಂದುವರಿದಿದೆ ಎಂದು ಸುಂದರ್ ರಾಜ್ ಹೇಳಿದರು.
ಜಿಲ್ಲಾ ಮೀಸಲು ಪಡೆ (ಡಿಆರ್ಜಿ), ವಿಶೇಷ ಕಾರ್ಯಪಡೆ (ಎಸ್ಟಿಎಫ್) ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸಿಬ್ಬಂದಿ ಕಾರ್ಯಾಚರಣೆ ನಡೆಸಿತು