ಅಹ್ಮದಾಬಾದ್, ನ 27 (DaijiworldNews/HR): ಗುಜರಾತ್ನ ಪೋರಬಂದರ್ನಲ್ಲಿ ಯೋಧನೊಬ್ಬ ತನ್ನ ಸಹೋದ್ಯೋಗಿಗಳ ಮೇಲೆ ಗುಂಡಿನ ದಾಳಿ ನಡೆಸಿದ ಪರಿಣಾಮ ಚುನಾವಣಾ ಕರ್ತವ್ಯದಲ್ಲಿ ನಿರತರಾಗಿದ್ದ ಇಬ್ಬರು ಯೋಧರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.
ಆರೋಪಿಯನ್ನು ಕಾನ್ಸ್ಟೆಬಲ್ ಎಸ್. ಇನೌಚಾಸಿಂಗ್ ಎಂದು ಗುರುತಿಸಲಾಗಿದ್ದು, ಕೊಲೆಯಾದ ಇಬ್ಬರು ಜವಾನರಾದ ತೊಯ್ಬಾ ಸಿಂಗ್ ಮತ್ತು ಜಿತೇಂದ್ರ ಸಿಂಗ್ ಮತ್ತು ಗಾಯಗೊಂಡವರನ್ನು ಕಾನ್ಸ್ಟೆಬಲ್ಗಳಾದ ಚೋರಜಿತ್ ಮತ್ತು ರೋಹಿಕಾನಾ ಎನ್ನಲಾಗಿದೆ.
ಶನಿವಾರ ಸಂಜೆ ಸಹೋದ್ಯೋಗಿಗಳ ನಡುವೆ ಯಾವುದೋ ವಿಚಾರಕ್ಕೆ ಜಗಳವಾಗಿದೆ ಅದು ವಿಕೋಪಕ್ಕೆ ತಿರುಗಿ ತನ್ನಲ್ಲಿದ್ದ ಎಕೆ – 47 ರೈಫಲ್ ನಿಂದ ಸಹೋದ್ಯೋಗಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.