ರಾಯ್ಪುರ, ನ 27 (DaijiworldNews/HR): ಭದ್ರತಾ ಪಡೆಗಳು ಮುಂಜಾನೆ ನಡೆಸಿದ ಎನ್ಕೌಂಟರ್ನಲ್ಲಿ ನಾಲ್ವರು ಮಾವೋವಾದಿಗಳು ಹತರಾಗಿರುವ ಘಟನೆ ಬಿಜಾಪುರ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಪೊಮ್ರಾ ಅರಣ್ಯ ಪ್ರದೇಶದಲ್ಲಿ 30-40 ಮಾವೋವಾದಿಗಳು ಅಡಗಿದ್ದ ಬಗ್ಗೆ ಭದ್ರತಾ ಪಡೆಗಳಿಗೆ ಮಾಹಿತಿ ಲಭಿಸಿದ್ದು, ಭದ್ರತಾ ಪಡೆಗಳು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದು, ಬಿಜಾಪುರ ಜಿಲ್ಲೆಯ ಮಿರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಎನ್ಕೌಂಟರ್ ನಡೆದಿದೆ.
ಇನ್ನು ಎನ್ಕೌಂಟರ್ ಬಳಿಕ ಮೂವರು ನಕ್ಸಲರ ಮೃತದೇಹಗಳು ಪತ್ತೆಯಾಗಿದ್ದು, ಶೋಧ ಕಾರ್ಯಾಚರಣೆ ವೇಳೆ ನಾಲ್ಕನೇ ನಕ್ಸಲನ ಮೃತದೇಹ ಪತ್ತೆಯಾಗಿದೆ.
ಸ್ಥಳದಲ್ಲಿದ್ದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಶೋಧ ಮುಂದುವರಿದಿದೆ.