ಶ್ರೀನಗರ, ನ 27 (DaijiworldNews/HR): ನಿಷೇಧಿತ ಇಸ್ಲಾಮಿ ಗುಂಪು ಜಮಾತ್-ಎ-ಇಸ್ಲಾಮಿ ಸಂಘಟನೆಗೆ ಸೇರಿದ ಸುಮಾರು 90 ಕೋಟಿ ರೂಪಾಯಿ ಮೌಲ್ಯದ ಹನ್ನೊಂದು ಪ್ರಮುಖ ಆಸ್ತಿಗಳನ್ನು ವಶಪಡಿಸಿಕೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ನಡೆದಿದೆ.
ರಾಜ್ಯ ತನಿಖಾ ಸಂಸ್ಥೆ ಜಮ್ಮು ಮತ್ತು ಕಾಶ್ಮೀರದಾದ್ಯಂತ ಜಮಾತ್-ಎ-ಇಸ್ಲಾಮಿ ಸೇರಿದ ಸುಮಾರು 200 ಆಸ್ತಿಗಳನ್ನು ಜಪ್ತಿ ಮಾಡಿಕೊಂಡಿದೆ ಎಂದು ಹೇಳಲಾಗಿದೆ.
ಇನ್ನು ಈ ತಿಂಗಳ ಆರಂಭದಲ್ಲಿ ಶಾಲಾ ಕಟ್ಟಡದಲ್ಲಿ ಭಯೋತ್ಪಾದನಾ ಚಟುವಟಿಕೆ ನಡೆಸುತ್ತಿದ್ದಾರೆ ಎನ್ನಲಾದ ಹಿನ್ನೆಲೆಯಲ್ಲಿ ದಾಳಿ ನಡೆಸಿ ಒಂಬತ್ತು ಆಸ್ತಿಗಳನ್ನು ಜಪ್ತಿಮಾಡಿಕೊಂಡಿತ್ತು.