ಮುಂಬೈ, ನ 28 (DaijiworldNews/MS): ಕರ್ನಾಟಕ-ಮಹಾರಾಷ್ಟ್ರ ನಡುವೆ ಗಡಿ ವಿವಾದ ಜೋರಾಗುತ್ತಿದ್ದು, ಮುಂಬೈ ಬಸ್ ನಿಲ್ದಾಣದಲ್ಲಿ ಕಿಡಿಗೇಡಿಗಳು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಪೋಸ್ಟರ್ಗೆ ಕಪ್ಪು ಮಸಿ ಬಳಿದಿರುವುದು ಕಂಡುಬಂದಿದೆ.
ರಾಜ್ಯದ ಪ್ರವಾಸೋದ್ಯಮ ಜಾಹೀರಾತು ಇದ್ದ ಪೋಸ್ಟರ್ ಇದಾಗಿದ್ದು, ಸಿಎಂ ಜತೆಗೆ ಸಚಿವ ಆನಂದ್ ಸಿಂಗ್ ಭಾವಚಿತ್ರಕ್ಕೂ ಕಪ್ಪು ಬಣ್ಣ ಬಳಿಯಲಾಗಿದೆ.
ಉಭಯ ರಾಜ್ಯಗಳ ನಡುವೆ ಗಡಿ ಗಲಾಟೆ ತೀವ್ರ ಸ್ವರೂಪ ಪಡೆಯುತ್ತಿರುವ ಕಾರಣ ಬೆಳಗಾವಿ ಸೇರಿ ಗಡಿ ಜಿಲ್ಲೆಗಳಿಂದ ಮಹಾರಾಷ್ಟ್ರಕ್ಕೆ ತೆರಳುವ 300ಕ್ಕೂ ಹೆಚ್ಚು ಕೆಎಸ್ ಆರ್ಇಟಿಸಿ ಬಸ್ ಸೇವೆ ಸ್ಥಗಿತಗೊಳಿಸಲಾಗಿದೆ.
ಇನ್ನು, ಮಹಾರಾಷ್ಟ್ರದಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಒಂದಕ್ಕೆ ಕೆಲವು ಕಿಡಿಗೇಡಿಗಳು, ಕಲ್ಲು ತೂರಾಟ ನಡೆಸಿದ ಘಟನೆಯ ಹಿನ್ನೆಲೆಯಲ್ಲಿ, ಗಡಿ ಭಾಗದ ಜಿಲ್ಲೆಗಳಲ್ಲಿ ಶಾಂತಿ ಸೌಹಾರ್ದತೆ ಕಾಪಾಡಿ, ಕಟ್ಟೆಚ್ಚರ ವಹಿಸುವಂತೆ, ಗೃಹ ಸಚಿವ ಆರಗ ಜ್ಞಾನೇಂದ್ರ ಪೊಲೀಸರಿಗೆ ಸೂಚಿಸಿದ್ದಾರೆ.